ಧಾರವಾಡ | ಅಂಡರ್ʼಪಾಸ್ನಲ್ಲಿ ಸಿಲುಕಿದ ಎಲ್ಪಿಜಿ ಟ್ಯಾಂಕರ್ ನಿಂದ ಅನಿಲ ಸೋರಿಕೆ; ವಿದ್ಯುತ್ ಕಡಿತ, ಜನರ ಓಡಾಟಕ್ಕೂ ನಿರ್ಬಂಧ
ಧಾರವಾಡ: ಎಲ್ಪಿಜಿ ಟ್ಯಾಂಕರ್ನಿಂದ ಅನಿಲ ಸೋರಿಕೆ ಆಗುತ್ತಿರುವುದರ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ಉಂಟಾಗಿದ್ದು, ವಿದ್ಯುತ್ ಸಂಪೂರ್ಣ ಕಡಿತಗೊಳಿಸಿದ್ದಲ್ಲದೆ ಜನರ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ.
ಧಾರವಾಡ ಹೈಕೋರ್ಟ್ ಬಳಿ ಅಂಡರ್ಪಾಸ್ನಲ್ಲಿ ಸಿಲುಕಿದ ಹೆಚ್ಪಿ ಕಂಪೆನಿಗೆ ಸೇರಿದ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆ ಆಗಿದೆ. ಸುರಕ್ಷತಾ ದೃಷ್ಟಿಯಿಂದ ಈ ಭಾಗದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸುರಕ್ಷತಾ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿಯಿಂದ ಧಾರವಾಡ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ (SP) ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
Next Story