Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್...

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Jan 2025 3:13 PM IST
share
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್ ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್ ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್ ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X