ರಾಜ್ಯಪಾಲರ ಮೇಲೆ ಬಿಜೆಪಿ-ದಳದವರೇ ಕಲ್ಲು ಎಸೆಯಬಹುದು : ಡಿ.ಕೆ.ಶಿವಕುಮಾರ್
ಬೆಂಗಳೂರು : ‘ಬಿಜೆಪಿ-ಜೆಡಿಎಸ್ನ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ರಾಜ್ಯಪಾಲರ ರಕ್ಷಣೆಗಾಗಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು, ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇವೆ ಎಂದು ಹೇಳಿದರು.
Next Story