Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರ ವಿಚಾರ | ಕೇಂದ್ರದ ವಿರುದ್ಧ...

ಬರ ಪರಿಹಾರ ವಿಚಾರ | ಕೇಂದ್ರದ ವಿರುದ್ಧ ಚುನಾವಣಾ ಆಯೋಗದ ಕದ ತಟ್ಟಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ9 April 2024 6:28 PM IST
share
ಬರ ಪರಿಹಾರ ವಿಚಾರ | ಕೇಂದ್ರದ ವಿರುದ್ಧ ಚುನಾವಣಾ ಆಯೋಗದ ಕದ ತಟ್ಟಿದ ಕಾಂಗ್ರೆಸ್

ಬೆಂಗಳೂರು : ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್,​ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಂಗಳವಾರ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್.ಉಗ್ರಪ್ಪ, ರಾಜ್ಯದಲ್ಲಿ ತೀವ್ರವಾದ ಬರವಿದೆ. ಕೇಂದ್ರ ಸಮಿತಿ ಕಳೆದ ಅಕ್ಟೋಬರ್ ನಲ್ಲಿ‌ ಭೇಟಿ ನೀಡಿದ್ದರು. ಇಲ್ಲಿಯವರೆಗೆ ಕೇಂದ್ರ ಹೇಳಿಕೆ ಬಿಟ್ಟರೆ ಪರಿಹಾರ ಕೊಟ್ಟಿಲ್ಲ. ಕಾನೂನುಬದ್ಧವಾಗಿ ಸಿಗಬೇಕಾದ ಪರಿಹಾರ ಕೊಟ್ಟಿಲ್ಲ ಎಂದರು.

ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ದಾವೆ ಹೂಡಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಕಪಾಳ ಮೋಕ್ಷ ಮಾಡುವ ಕೆಲಸ ಮಾಡಿದೆ. ಇನ್ನು ಬರಪರಿಹಾರ, ಕುಡಿಯುವ ನೀರು, ಮೇವಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ ಎಂದು ನುಡಿದರು.

ಏನಿದು ದೂರು?: ಬರ ಪರಿಹಾರ ಕೊಡುವ ವಿಚಾರದಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಈ ಬಗ್ಗೆ ನಾವು ಪತ್ರ ಬರೆದಿದ್ದೇವೆ. ಆದರೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆದರೆ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಸಹ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ನೆಪ ಹೇಳುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ಅಲ್ಲದೇ ತಕ್ಷಣವೇ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್​ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X