ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ | ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ರದ್ದು ಕೋರಿ ಈಡಿ ಹೈಕೋರ್ಟ್ ಮೊರೆ
- ಬಿ.ನಾಗೇಂದ್ರ
ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಈಡಿ ಹೈಕೋರ್ಟ್ ಮೆಟ್ಟಿಲೇರಿದೆ.
ಈ ಸಂಬಂಧ ಜಾರಿ ನಿರ್ದೇಶನಾಲಯ (ಈಡಿ) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿದೆ.
Next Story