ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ | ಸಿಎಂ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತುರ್ತು ಸಚಿವ ಸಂಪುಟ ಸಭೆ ರದ್ದು
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆಯಲಾಗಿತ್ತು, ಆದರೆ ಈ ಸಂಪುಟದ ವಿಶೇಷ ಸಭೆ ರದ್ದಾಗಿದೆ ಎಂದು ತಿಳಿದುಬಂದಿದೆ.
ರಾಜ್ಯಪಾಲರ ಕ್ರಮದ ವಿರುದ್ದ ಈಗಾಗಲೇ ಕಾನೂನು ಹೋರಾಟದ ಸುಳಿವು ನೀಡಿರುವ ರಾಜ್ಯ ಸರಕಾರ, ಕೇರಳ ಮಾದರಿಯಲ್ಲೆ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳುವ ಸಾಧ್ಯತೆಗಳಿವೆ.
ನಿರೀಕ್ಷೆಯಂತೆಯೇ ರಾಜಭವನದ ವಿರುದ್ದ ರಾಜ್ಯ ಕಾಂಗ್ರೆಸ್ ಸರಕಾರ ಚಳವಳಿ ನಡೆಸಲಿದ್ದು, ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಲಿದೆ.
Next Story