ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದಿಲ್ಲ : ಆರ್.ಬಿ.ತಿಮ್ಮಾಪುರ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರವಿದೆ ಎಂದು ಕೆಲ ಸುದ್ದಿವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿರುವುದು ಗಮನಕ್ಕೆ ಬಂದಿದೆ. ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ನಾನು ಆಸ್ಪದ ನೀಡುವುದಿಲ್ಲ ಎಂದರು.
ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳ ಕಿರುಕುಳ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾರಾದರು ದೂರು ನೀಡಿದರೇ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ನಮ್ಮ ಸಮುದಾಯದವರ ಮೇಲೆ ಹಿಂದಿನಿಂದಲೂ ಪದೇ, ಪದೇ ಟಾರ್ಗೆಟ್ ಮಾಡಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ಇಲಾಖೆಯಲ್ಲಿ ಯಾವುದೇ ಅವ್ಯವಹಾರ, ಭ್ರಷ್ಟಾಚಾರ ನಡೆದಿಲ್ಲ. ಈ ರೀತಿಯ ಸುಳ್ಳು ಆರೋಪ ಹಾಗೂ ಷಡ್ಯಂತ್ರ ಮಾಡುವವರಿಗೆ ನಾನು ಬಗ್ಗುವುದಿಲ್ಲ. ಈ ಕುರಿತು ನಾನು ಈಗಾಗಲೇ ಸೂಕ್ತ ತನಿಖೆ ನಡೆಸಿ, ತಪ್ಪು ಮಾಡಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗುಸಲು ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಆರ್.ಬಿ.ತಿಮ್ಮಾಪುರ ತಿಳಿಸಿದರು.