ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಂಫಿಲ್ ಮತ್ತು ಪಿಎಚ್.ಡಿ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು, ನ. 1: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2023-24ನೆ ಸಾಲಿನಲ್ಲಿ ಎಂಫಿಲ್ ಮತ್ತು ಪಿಎಚ್‍ಡಿ ಕೋರ್ಸ್‍ಗಳಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಎಂಫಿಲ್ ಮತ್ತು ಪಿಎಚ್.ಡಿ ಫೆಲೋಶಿಫ್ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ನ.15ರ ವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಈ ಹಿಂದೆ ಇಲಾಖೆಯು ಅಕ್ಟೋಬರ್ 31 ರವರೆಗೆ ಅರ್ಜಿ ಹಾಕಲು ಅವಕಾಶ ನೀಡಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಣೆ ಮಾಡಿ, ನ.15ರ ವರೆಗೆ ಕಾಲಾವಕಾಶ ನೀಡಿದೆ.
ಅರ್ಹತೆಗಳು
ಅಲ್ಪಸಂಖ್ಯಾತರ ನಿರ್ದೇಶನಾಲಯದ ಪಿಹೆಚ್‌ಡಿ, ಎಂ.ಫಿಲ್ ಫೆಲೋಶಿಪ್‌ಗೆ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಸುವ ವಿಧಾನ
- ವೆಬ್ ವಿಳಾಸ https://sevasindhu.karnataka.gov.in/ ಗೆ ಭೇಟಿ ನೀಡಿ.
- ತೆರೆದ ಮುಖಪುಟದಲ್ಲಿ 'New Users Register Here' ಎಂದಿರುವಲ್ಲಿ ಕ್ಲಿಕ್ ಮಾಡಿ.
- ನಂತರ ಓಪನ್ ಆಗುವ ಪೇಜ್‌ನಲ್ಲಿ ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.