ಶಾಲಾ ಶಿಕ್ಷಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಂಗ್ರೆಸ್ ನಾಯಕನ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಶಾಲಾ ಶಿಕ್ಷಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಜಿ ಶಿಕ್ಷಕಿಯೊಬ್ಬರು ನೀಡಿರುವ ದೂರಿನ್ವಯ ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪದಡಿ ಗುರಪ್ಪ ನಾಯ್ಡು ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಇದೇ ಶಾಲಾ ಮಂಡಳಿಯ ಅಧ್ಯಕ್ಷರಾಗಿರುವ ಗುರಪ್ಪ ನಾಯ್ಡು, ಶಿಕ್ಷಕಿಯರನ್ನು ಗುರಿಯಾಗಿಸಿಕೊಂಡು ನಿತ್ಯ ಕಿರುಕುಳ ನೀಡುವುದಲ್ಲದೆ, ತಮ್ಮೊಂದಿಗೆ ಹಾಸಿಗೆ ಹಂಚಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡುವವರಿಗೆ ಅಶ್ಲೀಲ ವಿಡಿಯೊ ಇದೆ ಎಂದು ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
Next Story