ಸಕಲೇಶಪುರ | ಪ್ರಚೋದನಾಕಾರಿ ಭಾಷಣ ಆರೋಪ; ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್ ದಾಖಲು
ಪ್ರಮೋದ್ ಮುತಾಲಿಕ್
ಸಕಲೇಶಪುರ : ಸಕಲೇಶಪುರದಲ್ಲಿ ಇತ್ತೀಚೆಗೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಇಲ್ಲಿನ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.9ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧನ ಗುಪ್ತಚರ ಸಿಬ್ಬಂದಿ ಶ್ರೀಧರ್ ಎಂ.ಕೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಬಿಎನ್ಎಸ್ 196 (1), 353 (2), 3(5) ಅಡಿ ಪ್ರಕರಣ ದಾಖಲಾಗಿದೆ.
Next Story