ಅಮಿತ್ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ವಹೊಸದಿಲ್ಲಿ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ವಿಧಾನ ಸಭೆ ಹಾಗೂ ಪರಿಷತ್ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ರವಿವಾರ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ ಕಾಲ ಮಾತು ಕತೆ ನಡೆಸಿದ್ದಾರೆ.
ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಅವರ ದೆಹಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ವಿಪಕ್ಷ ನಾಯಕನ ಆಯ್ಕೆ ವಿಳಂಬ:
ವಿಪಕ್ಷ ನಾಯಕನ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಶೀಘ್ರ ನೇಮಕವಾಗಲಿದೆ, ಅಚ್ಚರಿಯ ಹೆಸರು ಘೋಷಣೆಯಾಗಲಿದೆ ಎಂಬ ಹೇಳಿಕೆಯನ್ನೇ ಮತ್ತೆ ಮತ್ತೆ ಹೇಳಿ ಸಾಗ ಹಾಕುತ್ತಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.