ಬೆಂಗಳೂರಿಗೆ ಆಗಮಿಸಿದ ಫಾಕ್ಸ್ಕಾನ್ ಅಧ್ಯಕ್ಷ : ಸಚಿವರಿಂದ ಸ್ವಾಗತ
ಬೆಂಗಳೂರು: ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪೆನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.
ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಂಗ್ ಲಿಯು ಅವರನ್ನು ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕರೂಪ್ ಕೌರ್ ಹಾಜರಿದ್ದರು. ಫಾಕ್ಸ್ ಕಾನ್ ಕಂಪೆನಿಯು ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಯಂಗ್ ಲಿಯು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
Next Story