ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ : ಜಿ.ಪರಮೇಶ್ವರ್
ಬೆಂಗಳೂರು : ‘ಬಿಜೆಪಿ ಪಕ್ಷದ ನಾಯಕರು ಮೊದಲು ತಮ್ಮ ಮನೆಯನ್ನು ಸರಿ ಮಾಡಿಕೊಳ್ಳಲಿ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ. ಈಗಾಗಲೇ ಬಿಜೆಪಿ ಪಕ್ಷವೇ ಮನೆ ಒಂದು ಮೂರು ಬಾಗಿಲು ಆಗುವಂತೆ ಇದೆ. ಸರಕಾರದ ವಿರುದ್ಧ ಉದ್ದೇಶ ಪೂರಕವಾಗಿ ಟೀಕೆ ಮಾಡುವುದನ್ನು ಬಿಡಲಿ ಎಂದರು.
ಕ್ರಮ ತೆಗೆದುಕೊಳ್ಳುತ್ತೇವೆ : ಮುಡಾ ಹಗರಣ ಸಂಬಂಧ ನಾವು ಪಾದಯಾತ್ರೆ ಮಾಡುವುದಿಲ್ಲ. ಸಮಾವೇಶದ ಮಾದರಿಯಲ್ಲಿ ಜನರಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲಿದ್ದೇವೆ. ಬಿಜೆಪಿ ಪಾದಯಾತ್ರೆಗೆ ನಾವು ಅನುಮತಿ ಇಲ್ಲ.ಆದರೆ, ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಜನರಿಗೆ ತೊಂದರೆ ಆದರೆ ಮಾತ್ರ ಸುಮ್ಮನೆ ಇರುವುದಿಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.
‘ಅಕ್ರಮ ವಲಸಿಗರ ವಿರುದ್ಧವಾಗಿ ಇದೀಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. ವಿದೇಶಿಗರನ್ನು ಹೊಡೆದು, ಬಂಧಿಸಿ ಜೈಲಿನಲ್ಲಿಡಲಾಗುವುದಿಲ್ಲ. ರಾಜತಾಂತ್ರಿಕ ಮಾರ್ಗದಲ್ಲಿಯೇ ಕ್ರಮ ಕೈಗೊಳ್ಳಬೇಕು’
ಡಾ.ಜಿ.ಪರಮೇಶ್ವರ್ ಗೃಹ ಸಚಿವ