ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು: ಸಚಿವ ಆರ್.ಬಿ.ತಿಮ್ಮಾಪುರ
ಬೆಂಗಳೂರು: ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು. ಧರ್ಮ, ದೇವರು ವಿಚಾರದಲ್ಲಿ ಮಾತ್ರ ನಮಗೆ ನಂಬಿಕೆ ಇರಬೇಕು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನ ಗುಡಿ ಕಟ್ಟಿದರೆ ಸಾಲದು, ರಾಮ ರಾಜ್ಯ ಆಗಬೇಕು. ಜತೆಗೆ, ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು, ಧರ್ಮ, ದೇವರು ವಿಚಾರದಲ್ಲಿ ನಮಗೆ ನಂಬಿಕೆ ಇರಬೇಕು. ನನ್ನದೇ ಧರ್ಮ, ನಾನೇ ದೇವಸ್ಥಾನ ಕಟ್ಟುಬಿಡುತ್ತೇನೆ ಎನ್ನುವುದು ಸರಿಯಲ್ಲ. ಇಂತಹ ವಿಚಾರಗಳಿಂದ ದೇಶ ದಿವಾಳಿಯಾಗಲಿದೆ ಎಂದರು.
ಇನ್ನೂ, ರಾಜ್ಯ ಸರಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ. ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಬಜೆಟ್‍ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
Next Story