Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೋಡ್ಸೆ ಫೋಟೊ ಹಾಕಿ ವೈಭವೀಕರಿಸುವವರು...

ಗೋಡ್ಸೆ ಫೋಟೊ ಹಾಕಿ ವೈಭವೀಕರಿಸುವವರು ಮನುಷ್ಯರೇ?: ಲೇಖಕ ನಟರಾಜ್ ಹುಳಿಯಾರ್

ವಾರ್ತಾಭಾರತಿವಾರ್ತಾಭಾರತಿ15 July 2023 11:48 PM IST
share
ಗೋಡ್ಸೆ ಫೋಟೊ ಹಾಕಿ ವೈಭವೀಕರಿಸುವವರು ಮನುಷ್ಯರೇ?: ಲೇಖಕ ನಟರಾಜ್ ಹುಳಿಯಾರ್

ಮೈಸೂರು,ಜು.15: 'ಗೋಡ್ಸೆ ಫೋಟೊ ಹಾಕಿ ವೈಭವೀಕರಿಸುವವರು ಮನುಷ್ಯರೇ? ಗಾಂಧಿ ಬೇಡ ಎಂದರೆ ಬಿಟ್ಟುಬಿಡಿ, ಆದರೆ ಕೇಡನ್ನು ಮಾತ್ರ ಬೆಂಬಲಿಸಬೇಡಿ' ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ನಟರಾಜ್ ಹುಳಿಯಾರ್ ಕರೆ ನೀಡಿದರು.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಕನ್ನಡ ಸಂಘ ಶನಿವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಸಂಭ್ರಮ ಉಪನ್ಯಾಸ ಮಾಲೆ 'ನಮಗೆ ಬೇಕಾದ ಗಾಂಧಿ' ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಎಲ್ಲರೊಳಗೂ ಗಾಂಧಿ ಇದ್ದಾರೆ. ಗಾಂಧೀಜಿ ಅವರ ಅಹಿಂಸಾ ಮಾರ್ಗದಿಂದಲೇ ದೇಶ ಶುಭಿಕ್ಷವಾಗಿರುವುದು. ಅಂತಹದರಲ್ಲಿ ಕೆಲವರು ಗೋಡ್ಸೆ ಫೋಟೊ ಹಾಕಿ ವೈಭವೀಕರಿಸಲು ಹೊರಟಿದ್ದಾರೆ. ಇವರು ಮನುಷ್ಯರ, ನಿಮಗೆ ಗಾಂಧಿ ಬೇಡ ಎಂದರೆ ಬಿಟ್ಟುಬಿಡಿ. ಆದರೆ ಕೇಡನ್ನು ಬೆಂಬಲಿಸಬೇಡಿ' ಎಂದು ಹೇಳಿದರು.

'ಗಾಂಧಿ ಹೇಳಿಕೊಟ್ಟ ಪಾಠ, ಅಂಬೇಡ್ಕರ್ ಅವರ ಸಂವಿಧಾನದಿಂದ ಇಂದು ಅಲ್ಪ ಸ್ವಲ್ಪ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಚಿಂತನೆ ಮಾಡುತ್ತಿದ್ದರು. ಅದೇ ರೀತಿ ನಮ್ಮನ್ನು ಆಳುವವರು, ಮತ್ತು ಸಮಾಜದಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸುವವರು ಚಿಂತಿಸಬೇಕಿದೆ. ಗಾಂಧಿ ಅವರ ಫಲವಾಗಿ ಇಂದು ರಾಜ್ಯದ ಬಜೆಟ್ ನಲ್ಲಿ ಕಟ್ಟಕಡೆಯ ವ್ಯಕ್ತಿಗಳಿಗಾಗಿ ಅನುದಾನ ಮೀಸಲಿಡಲಾಗಿದೆ. ಹಾಗಾಗಿ ನಾವು ನೀವುಗಳೆಲ್ಲರೂ ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ' ಎಂದು ಕರೆ ನೀಡಿದರು.

'ಗಾಂಧೀಜಿ ಆ ಕಾಲದಲ್ಲೇ ಮಹಿಳೆಯರು ಸ್ವಾಲಂಬಿ ಜೀವನ ನಡೆಸಬೇಕು ಎಂದು ಪ್ರತಿ ಗ್ರಾಮಗಳಲ್ಲಿ ಮಹಿಳೆಯರಿಗೆ ಚರಕ ನೀಡಿದರು. ಇದರಿಂದ ಲಕ್ಷಾಂತರ ಹೆಣ್ಣು ಮಕ್ಕಳು ಸ್ವಾವಲಂಭಿ ಜೀವನ ನಡೆಸಿದರು.‌ಗಾಂಧಿ ಅವರು ಹಾಕಿಕೊಟ್ಟ ಮಾರ್ಗದಿಂದಲೇ ಕುವೆಂಪು ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದರು. ಮಾಸ್ತಿ, ಕುವೆಂಪು, ಮತ್ತು ಈಗಿನ ಸಾಹಿತಿ ದೇವನೂರ ಮಹಾದೇವ ಗಾಂಧಿಯಿಂದ ಒಂದೊಂದು ಪಾಠ ಕಲಿತಿದ್ದಾರೆ' ಎಂದು ಹೇಳಿದರು.

'ಕೋವಿಡ್ ಬಂದ ಸಂದರ್ಭದಲ್ಲಿ ವೈದ್ಯರು, ನಸ್9ಗಳು, ಆಂಬುಲೆನ್ಸ್ ಚಾಲಕರುಗಳು ಸೇರಿದಂತೆ ಅನೇಕರು ಗಡಿಕಾಯುವ ಯೋಧರಿಗಿಂತಲೂ ಹೋರಾಟ ಮಾಡಿದರು. ಯಾಕೆಂದರೆ ಅವರೊಳಗೆ ಗಾಂಧಿ ಇದ್ದರು. ಗಾಂಧಿ ಇಲ್ಲದಿದ್ದರೆ ನಮ್ಮ ಸಮಾಜ ಕುಸಿಯುತ್ತಿತ್ತು. ಗಾಂಧಿ ಇರುವುದರಿಂದಲೇ ನಾವು ಸತ್ಯ ಪ್ರಾಮಾಣಿಕತೆಯಿಂದ ಜೀವನ ನಡೆಸುತ್ತಿದ್ದೇವೆ' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ದಾಕ್ಷಾಯಿಣಿ, ಪ್ರಾಧ್ಯಾಪಕ ಡಾ.ರವೀಂದ್ರನಾಥ್, ಡಾ.ಚಂದ್ರಶೇಖರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X