Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು...

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ : ಕುಮಾರಸ್ವಾಮಿ ಟೀಕೆ

“ಎಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ಮಕ್ಕಳಿಂದಲೇ ವಸೂಲಿ”

ವಾರ್ತಾಭಾರತಿವಾರ್ತಾಭಾರತಿ3 Feb 2024 3:36 PM IST
share
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ : ಕುಮಾರಸ್ವಾಮಿ ಟೀಕೆ

ಬೆಂಗಳೂರು : ʼಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸೆಸ್ಸೆಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆʼ ಎಂದು ಮಾಜಿ ಸಿಎಂ ಕುಮಾರಾಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ʼಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, “ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸೆಸ್ಸೆಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ” ಎಂದು ಹೇಳಿದ್ದಾರೆ.

“ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ' ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಲಜ್ಜೆಗೆಟ್ಟು ಸುಲಿಗೆ ಮಾಡುತ್ತಿದೆ. ಇದೇ ಫೆ.26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ”ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯಾಗಿ ಹೋಗಿದೆ ಎನ್ನುವುದಕ್ಕೆ ಉದಾಹರಣೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ”, ಎಂದು ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

“ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು”, ಎಂದು ಕುಮಾರಸ್ವಾಮಿಯವರು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ @INCKarnataka ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ.1/5#ಗತಿಗೆಟ್ಟ_ಸರಕಾರ pic.twitter.com/rqF2qRl2WT

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 3, 2024

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ.4/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 3, 2024

ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಆಗ್ರಹಿಸುತ್ತೇನೆ.5/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 3, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X