ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರಕಾರ ಆದೇಶ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ರಾಜ್ಯ ಸರಕಾರ ಗುರುವಾರ ಆದೇಶಿಸಿದೆ.
ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ ನೀಡಿಲ್ಲ.
ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.
Next Story