Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋವಿಡ್ ವೇಳೆ ದುಬಾರಿ ದರಕ್ಕೆ ಪಿಪಿಇ...

ಕೋವಿಡ್ ವೇಳೆ ದುಬಾರಿ ದರಕ್ಕೆ ಪಿಪಿಇ ಕಿಟ್ ಪೂರೈಸಿದ ಪ್ರಕರಣ | ಖಾಸಗಿ ಕಂಪೆನಿಗಳ ವಿರುದ್ಧದ ತನಿಖಾ ವರದಿ ಸಲ್ಲಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 Feb 2025 12:15 AM IST
share
ಕೋವಿಡ್ ವೇಳೆ ದುಬಾರಿ ದರಕ್ಕೆ ಪಿಪಿಇ ಕಿಟ್ ಪೂರೈಸಿದ ಪ್ರಕರಣ | ಖಾಸಗಿ ಕಂಪೆನಿಗಳ ವಿರುದ್ಧದ ತನಿಖಾ ವರದಿ ಸಲ್ಲಿಸಿದ ಸರಕಾರ

ಬೆಂಗಳೂರು : ಕೋವಿಡ್-19 ಎರಡನೇ ಅಲೆ ಸಂದರ್ಭದಲ್ಲಿ ದುಬಾರಿ ದರಕ್ಕೆ ಪಿಪಿಇ ಕಿಟ್‌ಗಳನ್ನು ಪೂರೈಸಿದ ಪ್ರಕರಣಕ್ಕೆ ಕುರಿತಂತೆ ಪ್ರೂಡಂಟ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ ಹಾಗೂ ಲಾಜ್‌ ಎಕ್ಸ್‌ಪೋರ್ಟ್ ಲಿಮಿಟೆಡ್ ಕಂಪೆನಿಗಳ ವಿರುದ್ಧದ ವರದಿಯನ್ನು ಸರಕಾರ ಹೈಕೋರ್ಟ್‌ಗೆ ಸಲ್ಲಿಸಿದೆ.

ಪಿಪಿಇ ಕಿಟ್ ಪೂರೈಸಿದ ಈ ಎರಡು ಖಾಸಗಿ ಸಂಸ್ಥೆಗಳ ಪರವಾಗಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ರದ್ದು ಕೋರಿ ರಾಜ್ಯ ಸರಕಾರ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ನಡೆಸಿತ್ತು.

ಈ ವೇಳೆ ರಾಜ್ಯ ಸರಕಾರದ ಪರ ಹಾಜರಾಗಿದ್ದ ಎಎಜಿ ರೂಬೆನ್ ಜಾಕಬ್, ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಪಿಪಿಇ ಕಿಟ್‌ಗಳನ್ನು ಪೂರೈಸಲು ಪ್ರೂಡಂಟ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ ಹಾಗೂ ಲಾಜ್ ಎಕ್ಸ್‌ಪೋರ್ಟ್ ಲಿಮಿಟೆಡ್ ಕಂಪೆನಿಗಳು ಟೆಂಡರ್ ಪಡೆದುಕೊಂಡಿದ್ದವು.

ಆದರೆ, ಎರಡನೇ ಅಲೆ ಸಂದರ್ಭದಲ್ಲಿ ಹೊಸದಾಗಿ ಟೆಂಡರ್‌ನಲ್ಲಿ ಪಾಲ್ಗೊಳ್ಳದೇ ಅಧಿಕಾರಿಗಳ ಜೊತೆ ಶಾಮೀಲಾಗಿ ಈ ಎರಡು ಕಂಪೆನಿಗಳು ಆರೋಗ್ಯ ಇಲಾಖೆಗೆ ಪಿಪಿಇ ಕಿಟ್‌ಗಳನ್ನು ಪೂರೈಸಿವೆ. ಆದರೆ, ಪ್ರತೀ ಪಿಪಿಇ ಕಿಟ್‌ಗೆ 400 ರೂ. ಮೂಲ ಬೆಲೆ ಇದ್ದದ್ದು ಅದನ್ನು 1,312 ರೂ.ಗೆ ಪೂರೈಸಿದ್ದಾರೆ. ಈ ಸಂಬಂಧ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರು ತನಿಖೆ ನಡೆಸಿದ್ದು, ಅಕ್ರಮ ಪತ್ತೆ ಮಾಡಿದ್ದಾರೆ. ಇಲಾಖಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಇಡೀ ಕೋವಿಡ್ ಹಗರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು. ಆಯೋಗವು ವರದಿ ನೀಡಿದ್ದು, ಆ ವರದಿಯಲ್ಲಿ ಪ್ರೂಡಂಟ್ ಮ್ಯಾನೇಜ್‌ಮೆಂಟ್ ಸೋಲ್ಯೂಷನ್ ಹಾಗೂ ಲಾಜ್ ಎಕ್ಸ್ ಪೋರ್ಟ್ ಲಿಮಿಟೆಡ್ ಸಂಸ್ಥೆಗಳಿಗೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತು.

ವರದಿಯ ಲಕೋಟೆಯನ್ನು ತೆರೆದ ನ್ಯಾಯಪೀಠ, ಆ ವರದಿಯ ಪ್ರತಿಯನ್ನು ಖಾಸಗಿ ಸಂಸ್ಥೆಗಳ ಪರ ವಕೀಲರಿಗೆ ನೀಡುವಂತೆ ಹೆಚ್ಚುವರಿ ಅಡ್ವಕೇಟ್ ಜನರಲ್ ಅವರಿಗೆ ಸೂಚಿಸಿತು. ಅಲ್ಲದೆ ವರದಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಖಾಸಗಿ ಸಂಸ್ಥೆಗಳ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X