ಹೊರಟ್ಟಿ ಕಾನೂನು ಚೌಕಟ್ಟಿನಲ್ಲಿ ತೀರ್ಪು ಕೊಡುತ್ತಾರೆ, ನಾವೂ ತನಿಖೆ ನಡೆಸುತ್ತೇವೆ : ಜಿ.ಪರಮೇಶ್ವರ್
ಜಿ.ಪರಮೇಶ್ವರ್ | PC:PTI
ಬೆಂಗಳೂರು : ಸಿ.ವಿ.ರವಿ ಪ್ರಕರಣದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾನೂನು ಚೌಕಟ್ಟಿನಲ್ಲಿ ತೀರ್ಪು ಕೊಡುತ್ತಾರೆ. ಆದರೆ, ನಾವೂ ನಮ್ಮ ತನಿಖೆಯನ್ನು ಅದೇ ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿ.ವಿ.ರವಿ ಪ್ರಕರಣದಲ್ಲಿ ಬಸವರಾಜ ಹೊರಟ್ಟಿಯವರ ಪತ್ರ ಕುರಿತು ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಬರೆದಿರುವ ಪತ್ರದಲ್ಲಿ ಏನಿದೆ ಎನ್ನುವುದು ನೋಡಬೇಕು. ಅದಾದ ನಂತರ ಕಾನೂನು ಸಲಹೆ ಪಡೆಯುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಮಾಡುತ್ತೇವೆ ಎಂದರು.
ನಕ್ಸಲರ ಶರಣಾಗತಿ ಬಗ್ಗೆ ಪ್ರತಿಕ್ರಿಯಿಸಿ, ಅವರ ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶ ಇದ್ದು, ಸಂವಿಧಾನ ಹೇಳಿದ ದಾರಿಯಲ್ಲಿ ಹೋರಾಟ ಮಾಡಲಿ. ಆದರೆ ಶಸ್ತ್ರಗಳ ಬಳಕೆ ಮಾಡುವ ಮಾರ್ಗ ಬೇಡ. ಶಸ್ತ್ರಗಳ ದಾರಿ ಹಿಡಿಯಲ್ಲವೆಂದು ನಕ್ಸಲರು ಹೇಳಿದ್ದಾರೆ ಎಂದು ತಿಳಿಸಿದರು.
Next Story