Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು...

ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ಗ್ರಾ.ಪಂ. ಗ್ರಂಥಾಲಯಗಳಲ್ಲಿ ‘ನಾನು ಓದುವ ಪುಸ್ತಕ’ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ2 Sept 2023 6:54 PM IST
share
ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ಗ್ರಾ.ಪಂ. ಗ್ರಂಥಾಲಯಗಳಲ್ಲಿ ‘ನಾನು ಓದುವ ಪುಸ್ತಕ’ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆ.2: ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಂಥಾಲಯಗಳನ್ನು ಗ್ರಾಮೀಣ ಅರಿವು ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು ಸೆಪ್ಟೆಂಬರ್ ತಿಂಗಳಲ್ಲಿ ‘ನಾನು ಓದುವ ಪುಸ್ತಕ’ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಹೆಸರನ್ನು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರದರ್ಶಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳು ಪುಸ್ತಕವನ್ನು ಓದಲು ಗ್ರಂಥಾಲಯ ಮೇಲ್ವಿಚಾರಕರು ಪ್ರೋತ್ಸಾಹಿಸುತ್ತಾರೆ. ಮಕ್ಕಳು ಪುಸ್ತಕವನ್ನು ಓದಿ ಮುಗಿಸಿದ ನಂತರ ತಾವು ಓದಿದ ಪುಸ್ತಕಗಳ ಬಗ್ಗೆ ಸೂಚನೆಗಳಂತೆ ಮಾಹಿತಿ ಒದಗಿಸಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಕ್ಕಳು ಓದಿದ ಪುಸ್ತಕಗಳ ಸಂಖ್ಯೆಯನ್ನು ಗ್ರಂಥಾಲಯದಲ್ಲಿ ಪ್ರದರ್ಶಿಸಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಪುಸ್ತಕಗಳನ್ನು ಓದಿದ ಮಕ್ಕಳ ಹೆಸರುಗಳನ್ನು ತಿಂಗಳ ಕೊನೆಯ ದಿನದಂದು ಘೋಷಿಸಲಾಗುವುದು ಎಂದು ಹೇಳಿರುವ ಪ್ರಿಯಾಂಕ್ ಖರ್ಗೆ, ಗ್ರಾಮೀಣ ಮಕ್ಕಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X