ʼಗ್ರೇಟರ್ ಬೆಂಗಳೂರು ವಿಧೇಯಕʼಕ್ಕೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ರಾಜ್ಯಪಾಲರು

- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೆ ರಾಜ್ಯ ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ.
ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸ್ಪಷ್ಟನೆ ಕೇಳಿ ರಾಜ್ಯ ಸರಕಾರಕ್ಕೆ ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ.
Next Story