ಹಾಸನ | ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಂಡ ಅಧಿಕಾರಿ
ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ವೈರಲ್
ವೈರಲ್ ಆಗುತ್ತಿರುವ ಫೋಟೊ
ಹಾಸನ: ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎಂದು ಹಾಸನ ಬಿಇಒ ಕಚೇರಿ ಅಧೀಕ್ಷಕರೊಬ್ಬರು ತಮ್ಮ ಮೇಜಿನ ಮೇಲೆ ಹಾಕಿರುವ ಫಲಕದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಾಸನ ನಗರದ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್ ಅವರೇ ಈ ಫಲಕ ಹಾಕಿಕೊಂಡಿರುವ ಅಧಿಕಾರಿ.
ಈ ಹಿಂದೆ ಲೋಕೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ ಕಾರ್ಯದರ್ಶಿಯಾಗಿದ್ದರು. ಆ ಬಳಿಕ ಹಾಸನ ಕ್ಷೇತ್ರದ ಶಾಸಕರಾಗಿದ್ದ ಪ್ರೀತಂ ಜೆ.ಗೌಡರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚಿಗೆ ಬಿಇಒ ಕಚೇರಿ ಅಧೀಕ್ಷಕರಾಗಿ ಲೋಕೇಶ್ ಅವರು ಬಡ್ತಿ ಹೊಂದಿದ್ದಾರೆ.
ಸದ್ಯ ಲೋಕೇಶ್ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Next Story