ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಭೇಟಿಯಾಗಿದ್ದಾರೆ.
ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವಥ್ ನಾರಾಯಣ ಅವರು ಉಪಸ್ಥಿತರಿದ್ದರು.
Next Story