Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಝೀಕಾ ವೈರಸ್ ಸೋಂಕು ಬರದಂತೆ ಮುಂಜಾಗ್ರತಾ...

ಝೀಕಾ ವೈರಸ್ ಸೋಂಕು ಬರದಂತೆ ಮುಂಜಾಗ್ರತಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 July 2024 8:18 PM IST
share
ಝೀಕಾ ವೈರಸ್ ಸೋಂಕು ಬರದಂತೆ ಮುಂಜಾಗ್ರತಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಝೀಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಇಲಾಖೆಯು ಪ್ರಕಟಿಸಿದ್ದು, ವಾಸಿಸುವ ಪ್ರದೇಶದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡಬೇಕು ಎಂದು ತಿಳಿಸಿದೆ.

ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮುಚ್ಚಳದಿಂದ ಮುಚ್ಚಬೇಕು. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಬೇಕು ಎಂದು ಸೂಚನೆ ನೀಡಿದೆ.

ಝೀಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ. ಝೀಕಾ ವೈರಸ್ ಸೋಂಕು ದೃಢಪಟ್ಟಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯಬೇಕು ಎಂದು ತಿಳಿಸಿದೆ.

ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು. ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಝೀಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಝೀಕಾ ವೈರಸ್ ಸೋಂಕಿನ ಲಕ್ಷಣ: ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡು ಬರಬಹುದು ಎಂದು ಎಚ್ಚರಿಕೆ ನೀಡಿದೆ.

ಪತ್ತೆ ಹಚ್ಚುವ ವಿಧಾನ: ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಝೀಕಾ ವೈರಸ್ ಸೋಂಕನ್ನು ಪತ್ತೆ ಹಚ್ಚಬಹುದು.

ಝೀಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಝೀಕಾ ವೈರಸ್ ಸೋಂಕನ್ನು ಹರಡುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸ್ವಚ್ಚ ನಿಂತ ನೀರು ಈ ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X