ಕರಾವಳಿ ಸೇರಿ ರಾಜ್ಯದ ಆರು ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆ ಸಾಧ್ಯತೆ; 'ಯೆಲ್ಲೊ ಅಲರ್ಟ್' ಘೋಷಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಂಗಳವಾರ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಲಾಗಿದೆ.
ನವೆಂಬರ್ 7 ಮತ್ತು 8ರಂದು ಕರಾವಳಿ ಜಿಲ್ಲೆಗಳ ಅಲ್ಲಲ್ಲಿ 64.5ಮಿ.ಮೀ.ನಿಂದ 115.5 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ಹಾಗೂ ಬುಧವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಗುಡುಗಿನ ಜೊತೆಗೆ ಮೇಲೆ ಗಾಳಿ ಬಲವಾಗಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ಮುನ್ಸೂಚನೆ ನೀಡಿದೆ. ವಿಜಯಪುರ ಜಿಲ್ಲೆಯಲ್ಲಿ ಸೋಮವಾರ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
Next Story