ಸಿಎಂ ಸ್ಥಾನದಲ್ಲಿ ಮುಂದುವರಿಸುವುದು, ಬಿಡುವುದು ಹೈಕಮಾಂಡ್ ನಿರ್ಧಾರ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಸಚಿವರನ್ನು ಹೊಸದಿಲ್ಲಿಗೆ ಕರೆಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ, ಇದು ಸತ್ಯ. ನಮಗೆಲ್ಲರಿಗೂ ಒಂದೊಂದು ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದಾರೆ. ಇನ್ನೂ, ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಗಮನಿಸಿಲ್ಲ ಎಂದೂ ಅವರು ಉಲ್ಲೇಖಿಸಿದರು.
Next Story