ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಅಡ್ಯಾರ್‌ನಲ್ಲಿ ಪ್ರತಿಭಟನೆ ಹಿನ್ನೆಲೆ : ಹೆದ್ದಾರಿ ಬಂದ್ ಮಾಡದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎ.18ರಂದು ಮಂಗಳೂರಿನ ಅಡ್ಯಾರ್ ಬಳಿ ರಾಷ್ಟ್ರೀಯ ಹೆದ್ದಾರಿ 73ರ ಪಕ್ಕದ ಖಾಸಗಿ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನೆ ಸಂಬಂಧ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡದಂತೆ ಹೈಕೋರ್ಟ್ ಆದೇಶಿಸಿದೆ.
ಪ್ರತಿಭಟನೆಯಲ್ಲಿ ಬೃಹತ್ ಜನ ಸೇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ ಪೊಲೀಸರು ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಿ ಸುತ್ತೋಲೆ ಹೊರಡಿಸಿದ್ದರು.
ಇದನ್ನು ಪ್ರಶ್ನಿಸಿ ಮಂಗಳೂರಿನ ಸ್ಥಳೀಯ ನಿವಾಸಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಮೇಲಿನ ಆದೇಶ ನೀಡಿದೆ.
ಸರಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ಮಾಡಿ. ರಾಷ್ಟ್ರೀಯ ಹೆದ್ದಾರಿ ರಸ್ತೆ ಬ್ಲಾಕ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರಕಾರ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ
Next Story