HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹಳೆಯ ನಂಬರ್ ಪ್ಲೇಟ್‍ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರಕಾರ ಆದೇಶಿಸಿದೆ.
ಈಗಾಗಲೇ ರಾಜ್ಯ ಸರಕಾರ HSRP ನಂಬರ್ ಪ್ಲೇಟ್ ಅಳವಡಿಕೆಗೆ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಿದ್ದು, ಇದೀಗ ಮತ್ತೆ ಡಿಸೆಂಬರ್ 31ರವರೆಗೆ ಗಡುವು ನೀಡಿದೆ.
ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‍ಎಸ್‍ಆರ್‍ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‍ಎಸ್‍ಆರ್‍ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸರಕಾರ ಆದೇಶದಲ್ಲಿ ತಿಳಿಸಿದೆ.
1-4-2019ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ HSRP ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ.
Next Story