ಹುಬ್ಬಳ್ಳಿ | ಮಾರಾಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ
ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಎಂದು ಗುರುತಿಸಲಾಗಿದೆ. ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story