ನಾನು ಕೇಂದ್ರ ಮಂತ್ರಿಯಾಗಿಯೇ ಖುಷಿಯಾಗಿದ್ದೇನೆ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
Photo Credit- Twitter@mepratap
ಮೈಸೂರು: ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಚರ್ಚೆಯ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನ ಅರಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆʼʼ ಎಂದು ಸ್ಪಷ್ಟಪಡಿಸಿದ್ದಾರೆ.
ʼʼನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮೋದಿ ಅವರು ಮತ್ತೆ ಪ್ರಧಾನಿ ಆಗಲೆಂದು ನಾನು ಬಯಸುತ್ತೇನೆʼʼ ಎಂದು ಸ್ಪಷ್ಟಪಡಿಸಿದರು.
Next Story