ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ: ಸಿ.ಎಂ. ಇಬ್ರಾಹಿಂ
ಬೆಂಗಳೂರು, ನ. 20: ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದು, ಮುಂದೆ ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್.ಡಿ.ದೇವೇಗೌಡ ಇರುತ್ತಾರೋ ಇಲ್ಲವೂ ಗೊತ್ತಿಲ್ಲ ಎಂದು ಜೆಡಿಎಸ್ ಪಕ್ಷದಿಂದ ಅಮಾನತ್ತುಗೊಂಡಿರುವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಲೂ ಪಕ್ಷದ ಅಧ್ಯಕ್ಷ. ಅಲ್ಲದೆ, ಎಚ್.ಡಿ.ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ಮಗನಿಗಾಗಿ ಈ ರೀತಿ ಮಾಡಿದರೆ ಏನು ಮಾಡುತ್ತೀರಾ? ಎಂದು ಹೇಳಿದ ಅವರು, ಈಗಲೂ ಮನವಿ ಮಾಡುತ್ತೇವೆ. ತಮ್ಮ ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಒತ್ತಾಯಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ನೀಡಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.