ಕುಮಾರಸ್ವಾಮಿ ಆರೋಪಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಆ.6: "ಕುಮಾರಸ್ವಾಮಿಯವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನ ಮಂತ್ರಿಯವರೆಗೂ ಹೋಗಿದ್ದು, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವ ನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ರವಿವಾರ ಪ್ರತಿಕ್ರಿಯಿಸುತ್ತಾ ಅವರು ಈ ವಿಚಾರ ಪ್ರಸ್ತಾಪಿಸಿದರು.
"ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿ ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ" ಎಂದು ಡಿಕೆಶಿ ತಿಳಿಸಿದರು.
Next Story