ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯ ಮೂಲ ಪ್ರತಿ ಕಾಣೆಯಾಗಿದೆ ಎಂಬುದು ಸುಳ್ಳು: ಜಿ.ಪರಮೇಶ್ವರ್
ತುಮಕೂರು: ಎಚ್. ಕಾಂತರಾಜು ಅವರ ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ʼಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015ʼ (ಜಾತಿಗಣತಿ) ವರದಿ️ಯ ಮೂಲ ಪ್ರತಿ ಕಾಣೆಯಾಗಿದೆ ಎಂಬುದೆಲ್ಲ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಜಾತಿ ಗಣತಿ ವರದಿ ಸಲ್ಲಿಕೆಗೆ ಸಮಯ ನೀಡಿದ್ದು, ಆಯೋಗದ ಅಧ್ಯಕ್ಷರ ಅಧಿಕಾರ ಅವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದೆ ಎಂದರು.
ಜಾತಿಗಣತಿ ವರದಿ ಕೊಟ್ಟ ನಂತರ ಏನು ಮಾಡಬೇಕು ಎಂಬ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ವರದಿ ಸಲ್ಲಿಕೆಗೂ ಮುನ್ನವೇ ಪರ– ವಿರೋಧಗಳು ಕೇಳಿ ಬರುತ್ತಿವೆ. ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲದೆಯೇ ಈ ರೀತಿ ಚರ್ಚೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.
Next Story