ಬಿಜೆಪಿ ಅವಧಿಯ ಹಗರಣಗಳ ತನಿಖೆಯ ವರದಿ ಬರುವ ಮೊದಲೇ ಗುತ್ತಿಗೆದಾರರ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: 'ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ''ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?'' ಎಂದು ಅವರು ಪ್ರಶ್ನೆ ಮಾಡಿದ್ದಾರೆ.
''ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ'' ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ…
— Siddaramaiah (@siddaramaiah) August 11, 2023