ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತು ವಿದೇಶಕ್ಕೆ ಹಾರಿದ್ದು ನಾಚಿಕೆಗೇಡಿನ ಸಂಗತಿ: ನಳಿನ್ ಕುಮಾರ್ ಕಟೀಲ್
ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ
ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ಕೆಲ ದಿನಗಳ ಹಿಂದೆ ನಡೆದ ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಶಿವಮೊಗ್ಗದಲ್ಲಿ ಅಮಾಯಕ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಗಲಭೆ ನಡೆದರೂ, ಪೋಲೀಸರ ಮೇಲೆ ಕಲ್ಲು ತೂರಿದರೂ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತ್ರ 'ನನಗೂ ಇದಕ್ಕೂ ಸಂಬಂಧವೇ ಇಲ್ಲ' ಎಂಬಂತೆ ನಡೆದುಕೊಳ್ಳುತ್ತಿದ್ದಾರೆʼʼ ಎಂದು ಆರೋಪಿಸಿದ್ದಾರೆ.
ʼʼಈಗ, ಪರಮೇಶ್ವರ್ ಅವರು ತಮ್ಮ ಜವಾಬ್ದಾರಿ ಮರೆತು ವಿದೇಶಕ್ಕೆ ಹಾರಿದ್ದು ನಾಚಿಕೆಗೇಡಿನ ಸಂಗತಿʼʼ ಎಂದು ನಳಿನ್ ಕುಮಾರ್ ಕಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಅಮಾಯಕ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಗಲಭೆ ನಡೆದರೂ, ಪೋಲೀಸರ ಮೇಲೆ ಕಲ್ಲು ತೂರಿದರೂ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಗೃಹ ಸಚಿವ @DrParameshwara ಮಾತ್ರ 'ನನಗೂ ಇದಕ್ಕೂ ಸಂಬಂಧವೇ ಇಲ್ಲ' ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಈಗ, ತಮ್ಮ ಜವಾಬ್ದಾರಿ ಮರೆತು ವಿದೇಶಕ್ಕೆ ಹಾರಿದ್ದು ನಾಚಿಕೆಗೇಡಿನ ಸಂಗತಿ. pic.twitter.com/EgmKx1B6IS
— Nalinkumar Kateel (@nalinkateel) October 5, 2023
ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನ ತಂಡ ಭೇಟಿ
ಇನ್ನು ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಸತ್ಯ ಶೋಧನಾ ತಂಡ ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ನಂತರ ರಾಗಿಗುಡ್ಡಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳ ಪರಿಶೀಲನೆ ನಡೆಸಿದೆ.