ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧ ತೆರವು
ಹೊಸದಿಲ್ಲಿ : ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಇದ್ದ ನಿಷೇಧ ಅಂತ್ಯವಾಗಿದೆ.
ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ನ್ಯಾ.ಎಂ.ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.
ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರು ಜೈಲುಪಾಲಾಗಿದ್ದರು. ಬಳಿಕ 2015ರ ಜನವರಿ 23ರಂದು ಸುಪ್ರೀಂ ಕೋರ್ಟ್ ಜನಾರ್ದನ ರೆಡ್ಡಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸರ್ವೂಚ್ಚ ನ್ಯಾಯಾಲಯ ಕಡ್ಡಾಯಗೊಳಿಸಿತ್ತು.
Next Story