ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ ನಿಧನ
ಬೆಳಗಾವಿ: ರೈತ ಹೋರಾಟಗಾರ್ತಿ ಎಂದೇ ಗುರುತಿಸಿಕೊಂಡಿದ್ದ ಜಿಲ್ಲೆಯ ಖಾನಾಪುರದ ತೋಲಗಿ ಗ್ರಾಮದ ಜಯಶ್ರೀ ಗುರನ್ನವರ ಅವರು ಬುಧವಾರ ನಿಧನ ಹೊಂದಿರುವುದಾಗಿ ವರದಿಯಾಗಿದೆ.
ಬಹು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಜಯಶ್ರೀ ಗುರನ್ನವರ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೇ 22ರ ಬುಧವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಯಶ್ರೀ ಅವರು ರೈತ, ಬಡವರು, ದಲಿತಪರ ಹೋರಾಟದಲ್ಲಿ ನಿರಂತರವಾಗಿ ತೊಡಗಿದ್ದರು. ಇನ್ನು ಅನಾರೋಗ್ಯಕ್ಕೆ ತುತ್ತಾಗಿದ್ದ ಜಯಶ್ರೀ ಅವರನ್ನು ಈ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಆಪ್ತ ಸಹಾಯಕನ ಮೂಲಕ ಆರ್ಥಿಕ ನೆರವು ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು.
Next Story