Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚನ್ನಪಟ್ಟಣದಲ್ಲಿ ಮತದಾರರಿಗೆ ಕುರ್‌ಆನ್‌...

ಚನ್ನಪಟ್ಟಣದಲ್ಲಿ ಮತದಾರರಿಗೆ ಕುರ್‌ಆನ್‌ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌? : ವಿಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ10 Nov 2024 12:26 AM IST
share
ಚನ್ನಪಟ್ಟಣದಲ್ಲಿ ಮತದಾರರಿಗೆ ಕುರ್‌ಆನ್‌ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌? : ವಿಡಿಯೋ ವೈರಲ್‌

ಚನ್ನಪಟ್ಟಣ : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಮ್ಮ ಕೊನೆ ಹಂತದಲ್ಲಿ ಮತದಾರರ ಮನವೊಲಿಸಲು ತಮ್ಮದೇ ಆದ ಕಸರತ್ತು ಮುಂದುವರಿಸಿವೆ.

ಈ ಮಧ್ಯೆ ಚನ್ನಪಟ್ಟಣದಲ್ಲಿ ಜೆಡಿಎಸ್‌ನ ಕೆಲವು ಮುಖಂಡರು, ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು, ಮುಸ್ಲಿಂ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನ್‌ ಪ್ರತಿಯೊಂದಿಗೆ ನಗದು ಹಂಚಿರುವ ಆರೋಪ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಲೇ ಸಾಮಾಜಿಕ ಜಾಲತಾಣದಲ್ಲಿ ಕುರ್‌ಆನ್‌ನ ಪ್ರತಿಯೊಂದಿಗೆ ನಗದು ಹಂಚಿರುವ ಫೋಟೋ ಮತ್ತು ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಹಾಗೂ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ ವೈರಲ್‌ ಆಗಿರುವ ಫೋಟೋದಲ್ಲಿ ಒಂದು ಕವರ್‌ನಲ್ಲಿ ಒಂದು ಸಾವಿರ ನಗದು, ಮುಸ್ಲಿಮರು ನಮಾಝ್ ಮಾಡುವ ಮುಸಲ್ಲ(ನಮಾಝ್‌ ಮಾಡುವ ಬಟ್ಟೆ) ಹಾಗೂ ಕುರ್‌ಆನ್‌ನ ಒಂದು ಅಧ್ಯಾಯ ಯಾಸೀನ್‌ನ ಒಂದು ಪ್ರತಿ ಇದೆ. ಹಾಗೆಯೇ ಇದರೊಂದಿಗೆ ಜೆಡಿಎಸ್‌ನ ಕರಪತ್ರ ಇರುವುದು ನೋಡಬಹುದಾಗಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ಚನ್ನಪಟ್ಟಣ ನಿವಾಸಿಯೊಬ್ಬರು, ಕುರ್‌ಆನ್‌ನ ಪ್ರತಿ ಜೊತೆ ಜೆಡಿಎಸ್ ಹಣ ಹಂಚಿರುವುದಾಗಿ ಆರೋಪಿಸಿರುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ ಹಿರಿಯ ವ್ಯಕ್ತಿಯೊಬ್ಬರು, "ಜೆಡಿಎಸ್‌ನ ನಾಲ್ಕು ಮಂದಿ ಬಂದು ಒಂದು ಸಾವಿರ ದುಡ್ಡು, ಕುರ್‌ಆನ್‌ ಅಧ್ಯಾಯ ಇವೆಲ್ಲಾ ಕೊಟ್ಟು ಮತ ಕೇಳುತ್ತಿದ್ದಾರೆ. ನಾವೇನು ನಮ್ಮ ಧರ್ಮದ ವಿಶ್ವಾಸವನ್ನು ಮಾರಿಕೊಳ್ಳಬೇಕೇ? ನೀವು ಮತ ಕೇಳಿ, ಆದರೆ ನೀವು ಮಾಡುತ್ತಿರುವ ಕೆಲಸ ಏನು? ನೀವೇನು ನಮ್ಮ ಧರ್ಮವನ್ನು ಮಾರಲು ಹೊರಟಿದ್ದೀರಾ?" ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಕಡೆ ಕುರ್‌ಆನ್‌ ಪ್ರತಿ ಜೊತೆ ಕಾಂಗ್ರೆಸ್ ಹಣ ಹಂಚಿದೆ ಎಂದು ಜೆಡಿಎಸ್‌ ಮುಖಂಡರು ಸಹ ಆರೋಪ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X