ಅನ್ನಭಾಗ್ಯ ಯೋಜನೆಗೆ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ; ಸಿಎಂ ಸಿದ್ದರಾಮಯ್ಯ ಬಗ್ಗೆ ಹೇಳಿದ್ದೇನು?
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಬುಧವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, 'ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ' ಎಂದು ಹೇಳಿದರು.
''ನಾವಿಬ್ಬರೂ ಒಂದೇ ಜಿಲ್ಲೆಯವರು. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರು ಯಾರೂ ಹಸಿವಿನಿಂದ ಇರಬಾರದೆಂಬ ಕಾರಣಕ್ಕೆ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ'' ಎಂದು ಶ್ಲಾಘಿಸಿದರು.
''ಅನ್ನಭಾಗ್ಯ ಯೋಜನೆಗೆ ಕೇಂದ್ರ ಸಹಕಾರ ನೀಡದಿರುವುದು ಸರಿಯಲ್ಲ. ಅಕ್ಕಿಯನ್ನು ಕೇಂದ್ರ ಸರಕಾರ ನೀಡಬೇಕು. ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ. ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು'' ಎಂದು ಆಗ್ರಹಿಸಿದರು.
Next Story