ರಾಜ್ಯ ವಕ್ಫ್ ಮಂಡಳಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಜೀಲಾನಿ ಎಚ್. ಮೊಕಾಶಿ ನೇಮಕ
ಬೆಂಗಳೂರು, ನ.26: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಲ್ಪ ಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಜೀಲಾನಿ ಎಚ್. ಮೊಕಾಶಿಯವರನ್ನು ನೇಮಿಸಲಾಗಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಖಾನ್ ಪರ್ವೇಝ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಈ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಜೀಲಾನಿ ಎಚ್. ಮೊಕಾಶಿಯವರನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕ ಪ್ರಭಾರದಲ್ಲಿ ಮುಂದಿನ ಆದೇಶದ ವರೆಗೆ ನೇಮಕಗೊಳಿಸಲಾಗಿದೆ ಎಂದು ತಿಳಿಸಿದೆ.
Next Story