Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶರಣಾಗತರಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಶರಣಾಗತರಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Jan 2025 6:51 PM IST
share
ಶರಣಾಗತರಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ಶಸ್ತ್ರಾಸ್ತ್ರ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೆಜ್ಜೆ ಹಾಕಿದ್ದ ಆರು ಮಂದಿ ನಕ್ಸಲೀಯರನ್ನು ಎನ್‍ಐಎ ನ್ಯಾಯಾಲಯ ಜ.30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಿನ್ನೆಯಷ್ಟೇ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಶರಣಾಗತರಾಗಿದ್ದ ಆರು ಮಂದಿ ನಕ್ಸಲೀಯರನ್ನು ಕಾನೂನು ಪ್ರಕ್ರಿಯೆ ಅನ್ವಯ ಗುರುವಾರ ಇಲ್ಲಿನ ಮಡಿವಾಳದ ತಾಂತ್ರಿಕ ಕೇಂದ್ರದಲ್ಲಿರಿಸಿ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡ ವಿಚಾರಣೆ ನಡೆಸಿತು. ಈ ವೇಳೆ ಚಿಕ್ಕಮಗಳೂರು ಪೊಲೀಸರ ಜೊತೆಗೆ ನಕ್ಸಲ್ ನಿಗ್ರಹ ಪಡೆ ಹಾಗೂ ರಾಜ್ಯ ಗುಪ್ತಚರ ಅಧಿಕಾರಿಗಳು ನಕ್ಸಲೀಯರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಂಡರು.

ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನಗರದ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಜ.30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭೂಗತವಾಗಿರುವ ಎಲ್ಲ ಸದಸ್ಯರ ಹೆಸರುಗಳನ್ನ ಬಹಿರಂಗಪಡಿಸಬೇಕಿದೆ. ಶರಣಾದವರ ಸ್ವ ಇಚ್ಛಾ ಹೇಳಿಕೆಯನ್ನು ಇನ್ ಕ್ಯಾಮರಾ ವಿಧಾನದಲ್ಲಿ ದಾಖಲಿಸಬೇಕು. ಬಳಿಕ ಶರಣಾಗತಿ ವರದಿ ತಯಾರಿಸಿ, ಜಿಲ್ಲಾ ಶರಣಾಗತಿ ಸಮಿತಿಯ ಮುಂದಿಡಬೇಕು. ರಾಜ್ಯ ಶರಣಾಗತಿ ಸಮಿತಿಗೆ ಅನುಮೋದನೆಗಾಗಿ ಕಳುಹಿಸಿಕೊಡಬೇಕು. ಅನುಮತಿ ದೊರೆತ ಬಳಿಕ ಸರಕಾರ ಘೋಷಿಸಿರುವ ವಿಶೇಷ ಸೌಲಭ್ಯವನ್ನ ಜಿಲ್ಲಾ ಸಮಿತಿ ನೀಡಬೇಕೆಂದು ನ್ಯಾಯಾಲಯ ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ಮತ್ತೋರ್ವ ನಕ್ಸಲನ ಮನವೊಲಿಕೆಗೆ ಯತ್ನ..!

ಶೃಂಗೇರಿ ಮೂಲದ ನಕ್ಸಲ್ ರವೀಂದ್ರ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಎರಡು ತಿಂಗಳಿಂದ ಆರು ಮಂದಿಯೊಂದಿಗೆ ಸಂಪರ್ಕ ಸಾಧಿಸಿಲ್ಲ. ರಾಜ್ಯದ ನಕ್ಸಲ್ ಪಟ್ಟಿಯಲ್ಲಿ ರವೀಂದ್ರ ಹೆಸರಿದ್ದು, ಇನ್ನೊಂದು ವಾರದಲ್ಲಿ ಈತನ ಸಂಪರ್ಕ ಸಾಧಿಸಿ ಮುಖ್ಯವಾಹಿನಿಗೆ ಬರುವಂತೆ ಮನವೊಲಿಸಲಾಗುವುದು ಎಂದು ನಕ್ಸಲ್ ನೀತಿ ಹಾಗೂ ಪುನರ್ ವಸತಿ ಸಮಿತಿ ಸದಸ್ಯರು ಮಾಹಿತಿ ನೀಡಿದ್ದಾರೆ.

ನಕ್ಸಲ್ ಶಸ್ತ್ರಾಸ್ತ್ರಗಳ ಪತ್ತೆಗೆ ಪೊಲೀಸರ ತನಿಖೆ : ಗೃಹ ಸಚಿವ ಡಾ.ಪರಮೇಶ್ವರ್

"ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿದ್ದು, ಈ ವೇಳೆ ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ.99ರಷ್ಟು ಕೊನೆಯಾಗಿದೆ"

share
ವಾರ್ತಾಭಾರತಿ
ವಾರ್ತಾಭಾರತಿ
Next Story
X