ಕಲಬುರಗಿ: ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು; ಕುಟುಂಬಸ್ಥರ ಪ್ರತಿಭಟನೆ
ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ
ಮೃತ ವ್ಯಕ್ತಿ | ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿರುವ ಪ್ರತಿಭಟನಾಕಾರರು
ಕಲಬುರಗಿ: ಇಲ್ಲಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಗುರುವಾರ ವರದಿಯಾಗಿದೆ.
ನಗರದ ಹೊರ ವಲಯದಲ್ಲಿರುವ ಶರಣ ಸಿರಸಗಿ ನಿವಾಸಿ ಉದಯಕುಮಾರ (53) ಎಂಬ ವ್ಯಕ್ತಿ ಎಂದು ತಿಳಿದು ಬಂದಿದೆ.
ʼʼಉದಯಕುಮಾರ ಸಾವಿಗೆ ಅಲ್ಲಿನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಾರಣವಾಗಿದ್ದು, ತಪ್ಪಿತಸ್ಥ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಮೃತರ ಕುಟುಂಬಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ರಸ್ತೆಯಲ್ಲಿ ಸುಮಾರು 3 ತಾಸುಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವೊಂದರಲ್ಲಿ ಓರ್ವ ಆರೋಪಿಯ ಹುಡುಕಾಟದಲ್ಲಿದ್ದ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿತ್ತು. ಕಳ್ಳತನವಾಗಿದ್ದ ಮನೆಯಲ್ಲಿ ಫಿಂಗರ್ ಪ್ರಿಂಟ್ ಪರಿಶೀಲನೆ ವೇಳೆ ಮಡ್ಡಿ ಸಿರಸಗಿ ಗ್ರಾಮದ ಉದಯ್ ಪಾರ್ದಿ ಫಿಂಗರ್ ಪ್ರಿಂಟ್ಗೆ ಹೋಲಿಕೆಯಾಗಿತ್ತು.ಹೀಗಾಗಿ, ಉದಯ್ನನ್ನು ಮಡ್ಡಿ ಸಿರಸಗಿ ಗ್ರಾಮದಲ್ಲಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಯದಿಂದ ಕೆಳಗೆ ಕುಸಿದು ಬಿದ್ದ ಉದಯ್ನನ್ನು ತಕ್ಷಣವೇ ಪೊಲೀಸರು ನಗರದ ಜಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ತದನಂತರ ಮೃತಪಟ್ಟಿದ್ದಾನೆಂದು ವೈದ್ಯರು ಖಚಿತ ಪಡ ಎಂದು ತಿಳಿದು ಬಂದಿದೆ.
ʼʼಮೃತರ ಸಂಬಧಿಕರು ಸಲ್ಲಿಸುವ ದೂರು ಸ್ವೀಕರಿಸಿ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು. ತನಿಖೆಯ ನಂತರ ಪ್ರಕರಣದ ಸತ್ಯಾಸತ್ಯತೆ ಹೊರ ಬೀಳಲಿದೆʼʼ
-ಚೇತನ್ ಆರ್, ನಗರ ಪೊಲೀಸ್ ಕಮಿಷನರ್, ಕಲಬುರಗಿ