Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಮಾನ ನಿಲ್ದಾಣದಲ್ಲಿ ಎಪ್ರಿಲ್ ವೇಳೆಗೆ...

ವಿಮಾನ ನಿಲ್ದಾಣದಲ್ಲಿ ಎಪ್ರಿಲ್ ವೇಳೆಗೆ ‘ಕಲಾಲೋಕ’ ಮಾರಾಟ ಮಳಿಗೆ: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Jan 2024 6:28 PM IST
share
ವಿಮಾನ ನಿಲ್ದಾಣದಲ್ಲಿ ಎಪ್ರಿಲ್ ವೇಳೆಗೆ ‘ಕಲಾಲೋಕ’ ಮಾರಾಟ ಮಳಿಗೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಸರಕಾರಿ ಉದ್ದಿಮೆಗಳ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು ‘ಕಲಾಲೋಕ’ ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಪ್ರಿಲ್ ವೇಳೆಗೆ ಆರಂಭವಾಗಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಮಾನ ನಿಲ್ದಾಣದ ಅಧಿಕಾರಿಗಳ (ಬಿಐಎಎಲ್) ಉಪಸ್ಥಿತಿಯಲ್ಲಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸರಕಾರಿ ಸ್ವಾಮ್ಯದ ಕೆಎಸ್‍ಡಿಎಲ್, ಕೆಎಸ್‍ಐಸಿ (ಕರ್ನಾಟಕ ರೇಶ್ಮೆ ಉದ್ಯಮ ನಿಗಮ), ಕಾಫಿ ಬೋರ್ಡ್ ಮತ್ತು ಲಿಡ್ಕರ್ ಸಂಸ್ಥೆಗಳು ತಯಾರಿಸುವ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು ಎಂದು ನುಡಿದರು.

ಅವುಗಳ ಜತೆಗೆ ನಾಡಿನಲ್ಲಿ ತಯಾರಾಗುವ ಪಾರಂಪರಿಕ ಆಟಿಕೆಗಳಾದ ಚನ್ನಪಟ್ಟಣ ಆಟಿಕೆ, ಇಳಕಲ್ ಸೀರೆ, ಲಂಬಾಣಿ ಕುಸೂತಿ ಇತ್ಯಾದಿ ಉತ್ಪನ್ನಗಳನ್ನು ವಿಮಾನ ನಿಲ್ದಾಣದ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಾಗಿಸಲಾಗುತ್ತದೆ. ಇದಕ್ಕಾಗಿ, ಹೊಸದಾಗಿ ನಿರ್ಮಿಸಿರುವ ಟರ್ಮಿನಲ್-2ರ ದೇಶೀಯ ಮತ್ತು ಅಂತರ್ ರಾಷ್ಟ್ರೀಯ ನಿರ್ಗಮನ ವಲಯದಲ್ಲಿ ತಲಾ 180 ಚದುರ ಮೀಟ‌ರ್ ಗಳ ಜಾಗ ಗುರುತಿಸಲಾಗಿದೆ. ಅಲ್ಲಿ ವಿಭಿನ್ನ ಶೈಲಿಯಲ್ಲಿ ವಿನ್ಯಾಸಗೊಳಿಸಿದ ಮಳಿಗೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿದರು.

ನಮ್ಮ ನಾಡಿನ ಅಸ್ಮಿತೆ ಬಿಂಬಿಸುವ ಈ ಸಂಸ್ಥೆಗಳ ಉತ್ಪನ್ನಗಳನ್ನು ವಿಮಾನ ನಿಲ್ದಾಣದಲ್ಲಿನ ಗ್ರಾಹಕರಿಗೆ ಒಂದೇ ಸೂರಿನಡಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದ್ದು, ಕೈಗಾರಿಕಾ ಇಲಾಖೆಯು ಇದರ ಉಸ್ತುವಾರಿ ವಹಿಸಲಿದೆ. ನಿಲ್ದಾಣದ ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಅದಕ್ಕೆ ತಕ್ಕಂತೆ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡಲು ಗಮನಹರಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.

ಕಾಫಿ ಬೋರ್ಡ್, ಕೇಂದ್ರದ ವ್ಯಾಪ್ತಿಗೆ ಬರುತ್ತದಾದರೂ ಸ್ಥಾಪನೆಯಾಗಲಿರುವ ಮಳಿಗೆಗಳಲ್ಲಿ ಕರ್ನಾಟಕ ಮೂಲದ ಕಾಫಿ ಸ್ವಾದಗಳು ಸೇವನೆಗೆ ಲಭ್ಯವಿರುತ್ತವೆ. ಜೊತೆಗೆ, ಇಲ್ಲಿನ ವಿವಿಧ ನಮೂನೆಯ ಕಾಫಿ ಪುಡಿಯನ್ನು ಗ್ರಾಹಕರು ಕೊಳ್ಳಬಹುದಾಗಿರುತ್ತದೆ ಎಂದು ಅವರು ಹೇಳಿದರು. ಈ ವೇಳೆ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ನಿಲ್ದಾಣದ ಉಪಾಧ್ಯಕ್ಷ ವೆಂಕಟರಾಮನ್, ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಪೂಜಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X