ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿಯೂ ಹೆಸರು ಮುದ್ರಣ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಸರಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ,2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಸೇವೆಗಳು ಮತ್ತು ಸಮನ್ವಯ)ಯ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಕೆ. ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
Next Story