ನನ್ನ ಮಗ ಕಾಂತೇಶ ಹಾವೇರಿ ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್. ಈಶ್ವರಪ್ಪ
ಹಾವೇರಿ: ನನ್ನ ಮಗ ಕೆ.ಇ.ಕಾಂತೇಶ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ಟಿಕೆಟ್ ನೀಡುವಾಗ ಪಕ್ಷದ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡಬೇಕಿದೆ. ಸಂಸದ ಶಿವಕುಮಾರ ಉದಾಸಿ ಅವರು ವೈಯಕ್ತಿಕ ಕಾರಣಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಕಾಂತೇಶ ಇಲ್ಲಿಂದ ಸ್ಪರ್ಧಿಸಲು ಇಚ್ಛಿಸಿದ್ದಾರೆ. ಹಲವು ನಾಯಕರು ಹಾಗೂ ಮುಖಂಡರಿಗೂ ಕಾಂತೇಶ ಸ್ಪರ್ಧಿಸಲಿ ಎಂಬ ಬಯಕೆಯಿದೆ'' ಎಂದು ಹೇಳಿದರು.
'''ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ಆರ್ಥಿಕವಾಗಿ ಸರ್ಕಾರ ದಿವಾಳಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ಹಣ ಜೋಡಿಸುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು. ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು'' ಎಂದು ಆಗ್ರಹಿಸಿದರು.
''ರಾಜ್ಯದಲ್ಲಿ ಮೋಸದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಅಂತಾ ಜನರು ಪರಿತಪಿಸುತ್ತಿದ್ದಾರೆ. ಗ್ಯಾರಂಟಿ ನಂಬಿ ಕಾಂಗ್ರೆಸ್ ಗೆ ಜನ ವೋಟ್ ಕೊಟ್ಟಿದ್ದರು. ಇದನ್ನ ನಂಬಿ ಮತ ಕೊಟ್ಟ ಜನರು ಈಗ ವಿರೋದ ಮಾಡುತ್ತಿದ್ದಾರೆ.ಅಕ್ಕಿ ಕೇಂದ್ರ ಸರಕಾರ ಕೊಟ್ಟಿಲ್ಲ ಅಂತಾ ದಾರಿ ತಪ್ಪಿಸುತ್ತಿದ್ದಾರೆ'' ಎಂದು ಕಿಡಿಕಾರಿದರು.