Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಬಂದ್‌ಗೆ ಹಲವೆಡೆ ನೀರಸ...

ಕರ್ನಾಟಕ ಬಂದ್‌ಗೆ ಹಲವೆಡೆ ನೀರಸ ಪ್ರತಿಕ್ರಿಯೆ

►ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ; ಕನ್ನಡ ಪರ ಹೋರಾಟಗಾರರ ಬಂಧನ

ವಾರ್ತಾಭಾರತಿವಾರ್ತಾಭಾರತಿ22 March 2025 9:00 AM IST
share
ಕರ್ನಾಟಕ ಬಂದ್‌ಗೆ ಹಲವೆಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು, ಮಾ.22: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ.

ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಎಂದಿನಂತೆ ಜನಜೀವನ ಆರಂಭಗೊಂಡಿದೆ. ಅಂಗಡಿ ಮುಂಗಟ್ಟುಗಳು ತೆರೆದಿವೆ. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ರಾಜ್ಯದ ವಿವಿಧ ಮಾರ್ಗಗಳಿಗೆ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಂದ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಸಾರ್ಟಿಸಿ ಬಸ್‌ಗಳ ಹಾಗೂ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಎಂಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ, ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲು ಕರವೇ ನಿರ್ಧರಿಸಿದೆ.

ಪ್ರತಿಭಟನಾಕಾರರು ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್​ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. 1 ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ಗೆ ಬೆಂಬಲ ಸೂಚಿಸಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು.

ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್‌ಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಾಗುತ್ತಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆ ಇದ್ದು, ಭದ್ರತೆಗೆ 100 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ, ಇಬ್ಬರು ಇನ್ಸ್​ಪೆಕ್ಟರ್, 6 ಸಬ್ ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ರಸ್ತೆಯಲ್ಲಿಯೇ ಮಲಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕರವೇ ಶಿವರಾಮೇಗೌಡ ಬಣದಿಂದ ಈ ಪ್ರತಿಭಟನೆ ನಡೆದಿದೆ.

ದಾವಣಗೆರೆಯಲ್ಲಿ ಕರ್ನಾಟಕ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಅಹಿತಕರ ಘಟನೆ ನಡೆಯದಂತೆ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X