ದ್ವಿತೀಯ ಪಿಯುಸಿ, ಎಸೆಸೆಲ್ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ
ಬೆಂಗಳೂರು : ಪ್ರಸಕ್ತ ವರ್ಷದ(2025ರ) ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1ರಿಂದ ಮಾ.20ರ ವರೆಗೆ ಮತ್ತು ಎಸೆಸೆಲ್ಸಿ ಪರೀಕ್ಷೆಯು ಮಾ.21ರಿಂದ ಎ.4ರ ವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ವೇಳಾಪಟ್ಟಿ: ದ್ವಿತೀಯ ಪಿಯುಸಿ ಪರೀಕ್ಷೆ-1ಯು ಮಾ.1ರಿಂದ ಆರಂಭವಾಗಲಿದ್ದು, ಮಾ.1ರಂದು ಕನ್ನಡ, ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮಾ.3ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಭಾಷಾ ಪರೀಕ್ಷೆಗಳು ನಡೆಯಲಿವೆ.
ಮಾ.5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.7ರಂದು ಇತಿಹಾಸ, ಭೌತಶಾಸ್ತ್ರ, ಮಾ.10ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಮಾ.12ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮಾ.13ರಂದು ಅರ್ಥಶಾಸ್ತ್ರ, ಮಾ.15ರಂದು ಇಂಗ್ಲೀಷ್, ಮಾ.17ರಂದು ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಮಾ.18ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮಾ.19ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳು ಹಾಗೂ ಮಾ.20ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮಾ.19ರಂದು ನಡೆಯುವ ಪರೀಕ್ಷೆಗಳು ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದ್ದು, ಉಳಿದ ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಎಸೆಸೆಲ್ಸಿ ವೇಳಾಪಟ್ಟಿ: ಎಸೆಸೆಲ್ಸಿ ಪರೀಕ್ಷೆಯು ಮಾ.21ರಿಂದ ಆರಂಭವಾಗಲಿದ್ದು, ಮಾ.21ರಂದು ಪ್ರಥಮ ಭಾಷೆ ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಮಾ.24ರಂದು ಗಣಿತ, ಸಮಾಜಶಾಸ್ತ್ರ, ಮಾ.26ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಹಾಗೂ ಮಾ.29ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಎ.1ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಎ.2ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.
ಎ.4ರಂದು ತೃತೀಯ ಬಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ಹಾಗೂ ಅದೇ ದಿನ ಎನ್ಎಸ್ಕ್ಯೂಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ರೀಟೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ ಅಂಡ್ ಹಾರ್ಡ್ವೇರ್ ಪರೀಕ್ಷೆಗಳು ನಡೆಯಲಿವೆ.
ಎನ್ಎಸ್ಕ್ಯೂಎಫ್ ವಿಷಯದ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ಹಾಗೂ ಮಾ.26ರಂದು ನಡೆಯುವ ದ್ವಿತೀಯ ಭಾಷೆ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಉಳಿದ ಎಲ್ಲ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ.
ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://kseab.karnataka.gov.inಗೆ ಸಂಪರ್ಕಿಸಬಹುದಾಗಿದೆ.