Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್‌ 2025 | ‘ಗೃಹಜ್ಯೋತಿ’...

ರಾಜ್ಯ ಬಜೆಟ್‌ 2025 | ‘ಗೃಹಜ್ಯೋತಿ’ ಯೋಜನೆಗೆ 10,100 ಕೋಟಿ ರೂ.ಅನುದಾನ

ವಾರ್ತಾಭಾರತಿವಾರ್ತಾಭಾರತಿ7 March 2025 5:35 PM IST
share
ರಾಜ್ಯ ಬಜೆಟ್‌ 2025 |  ‘ಗೃಹಜ್ಯೋತಿ’ ಯೋಜನೆಗೆ 10,100 ಕೋಟಿ ರೂ.ಅನುದಾನ

ಬೆಂಗಳೂರು : ‘ಗೃಹಜ್ಯೋತಿ’ ಯೋಜನೆಯಡಿ 1.62 ಕೋಟಿ ಗ್ರಾಹಕರು ನೊಂದಾಯಿಸಿದ್ದಾರೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 9,657 ಕೋಟಿ ರೂ. ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 10,100 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಸರಕಾರದ ವತಿಯಿಂದ 10 ಎಚ್.ಪಿ.ವರೆಗಿನ ನೀರಾವರಿ ಪಂಪ್ ಸೆಟ್ ವಿದ್ಯುತ್ ಸರಬರಾಜಿಗಾಗಿ ಧನಸಹಾಯ ನೀಡುವ ಯೋಜನೆಯಡಿ 33.84 ಲಕ್ಷ ಪಂಪ್ ಸೆಟ್‍ಗಳಿಗೆ 16,021 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಒಂದು ಪಂಪ್‍ಸೆಟ್‍ಗೆ ಒಂದು ವರ್ಷಕ್ಕೆ ಸರಾಸರಿ 50 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ.

ಹೆಚ್ಚಾಗುತ್ತಿರುವ ವಿದ್ಯುತ್ ಬೇಡಿಕೆಯನ್ನು ನೆರವೇರಿಸಲು ರಾಜ್ಯದ ಸ್ಥಾಪಿತ ಸಾಮರ್ಥ್ಯವನ್ನು 32 ಗಿಗಾವ್ಯಾಟ್ ನಿಂದ 60 ಗಿಗಾವ್ಯಾಟ್‍ಗೆ ಹೆಚ್ಚಿಸುವ ಗುರಿಯನ್ನು ಹಿಂದಿನ ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಇದಕ್ಕಾಗಿ ಈ ಕೆಳಗಿನ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 31.83 ಗಿಗಾವ್ಯಾಟ್ ನಿಂದ 34.99 ಗಿಗಾವ್ಯಾಟ್‍ಗೆ ಹೆಚ್ಚಿಸಲಾಗಿದೆ.

2008 ರಿಂದ ನೆನೆಗುದಿಗೆ ಬಿದ್ದಿದ್ದ 13,000 ಕೋಟಿ ರೂ. ಯೋಜನಾ ವೆಚ್ಚದ 800 ಮೆಗಾವ್ಯಾಟ್ ಸಾಮರ್ಥ್ಯದ ಗೋದ್ನಾ ಶಾಖೋತ್ಪನ್ನ ವಿದ್ಯುತ್ ಸ್ಥಾವರವನ್ನು ಟಿಬಿಸಿಬಿ ಮಾದರಿಯಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಿದೆ. 10,240 ಕೋಟಿ ರೂ. ವೆಚ್ಚದ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲಾಂಟ್ ಅನುಷ್ಠಾನಕ್ಕಾಗಿ ವನ್ಯಜೀವಿ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ನವೀಕರಿಸಬಹುದಾದ ಮೂಲಗಳಿಂದ ಉತ್ಪಾದನೆಯಾಗುವ ಇಂಧನದ ಶೇಖರಣೆಗಾಗಿ ಕೆಪಿಟಿಸಿಎಲ್ ಮೂಲಕ ಏಳು ಸಬ್ ಸ್ಟೇಷನ್‍ಗಳಲ್ಲಿ 1,000 ಮೆಗಾವ್ಯಾಟ್ ಅವರ್ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆಯನ್ನು 1,846 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.

ರೈತರ ನೀರಾವರಿ ಪಂಪ್ ಸೆಟ್‍ಗಳ ವಿಕೇಂದ್ರೀಕೃತ ಫೀಡರ್ ಸೌರೀಕರಣ ಕಾರ್ಯವನ್ನು ಕುಸುಮ್-ಸಿ ಯೋಜನೆಯಡಿ ಕೈಗೊಳ್ಳಲಾಗಿದೆ. ಪ್ರಥಮ ಹಂತದಲ್ಲಿ 1,302 ಮೆಗಾವ್ಯಾಟ್ ಸಾಮಥ್ರ್ಯದ ಗುರಿ ಹೊಂದಲಾಗಿದ್ದು, 21 ಮೆಗಾವ್ಯಾಟ್ ಸಾಮಥ್ರ್ಯದ ಐದು ಕಾಮಗಾರಿಗಳು ಪೂರ್ಣಗೊಂಡಿವೆ. ಎರಡನೇ ಹಂತದಲ್ಲಿ ಒಟ್ಟು 1,192 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಕುಸುಮ್-ಬಿ ಅಡಿಯಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸುವ ರೈತರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರಕಾರದ ಪಾಲನ್ನು ಶೇ.50ಕ್ಕೆ ಹೆಚ್ಚಿಸಿದ್ದು, ಫಲಾನುಭವಿಗಳು ಶೇ.20ರಷ್ಟನ್ನು ಮಾತ್ರ ಭರಿಸಬೇಕಾಗುತ್ತದೆ. ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್‍ಗಳಿಗೆ ಅನುಮೋದನೆ ನೀಡಲಾಗಿದ್ದು, ರಾಜ್ಯ ಸರಕಾರದ ಪಾಲು 752 ಕೋಟಿ ರೂ. ವೆಚ್ಚ ಮಾಡಲಾಗುವುದು.

ಪ್ರಸರಣ ಜಾಲದ ಬಲವರ್ಧನೆಗಾಗಿ 115 ಹೊಸ ಉಪಕೇಂದ್ರಗಳ ಸ್ಥಾಪನೆ, 411 ಉಪ ಕೇಂದ್ರಗಳ ಉನ್ನತೀಕರಣ ಹಾಗೂ 3,490.81 ಕಿ.ಮೀ ಗಳ ಪ್ರಸರಣಾ ಮಾರ್ಗದ ರಚನೆಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 8,833 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು.

ವಿತರಣಾ ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 25,971 ಕೊಳವೆ ಬಾವಿಗಳ ವಿದ್ಯುದ್ದೀಕರಣ, 6,887 ಕುಡಿಯುವ ನೀರಿನ ಯೋಜನೆಗಳ ವಿದ್ಯುದ್ದೀಕರಣ, 1.94 ಲಕ್ಷ ವಿತರಣಾ ಪರಿವರ್ತಕಗಳ ಅಳವಡಿಕೆ, 51,975 ಎಚ್‍ಟಿ ಮಾರ್ಗ ಮತ್ತು 45,047 ಎಲ್‍ಟಿ ಮಾರ್ಗಗಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯತಿಗಳಲ್ಲಿ, ಬೀದಿ ದೀಪಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಪ್ರತ್ಯೇಕವಾದ ಫೇಸ್ ವೈರ್ ಅಳವಡಿಸುವ ಕಾಮಗಾರಿಯನ್ನು 850 ಕೋಟಿ ರೂ. ವೆಚ್ಚದಲ್ಲಿ ಎಸ್ಕಾಂಗಳ ಮೂಲಕ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಸ್ಥಾವರಗಳ ಸ್ಥಾಪನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೃಷಿ ಭೂಮಿಗೆ ಭೂ ಪರಿವರ್ತನೆ ಪ್ರಕ್ರಿಯೆಯಿಂದ ವಿನಾಯಿತಿ.

ವಿದ್ಯುತ್ ಪ್ರಸರಣ ವಲಯದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದುತ್ತಿರುವ ಇನ್‍ಫ್ರಾಸ್ಟ್ರಕ್ಚರ್ ಇನ್ವೆಸ್ಟ್‍ಮೆಂಟ್ ಟ್ರಸ್ಟ್ ಅನ್ನು ಕೆಪಿಟಿಸಿಎಲ್ ನಲ್ಲಿ ರಚಿಸಲು ರಾಜ್ಯ ಸರಕಾರವು ಅನುಮೋದನೆ ನೀಡಿದೆ. ಈ ಟ್ರಸ್ಟ್ ಮೂಲಕ 5 ಸಾವಿರ ಕೋಟಿ ರೂ. ಹೂಡಿಕೆಯನ್ನು ಸಂಗ್ರಹಿಸಿ, ವಿವಿಧ ಯೋಜನೆಗಳಿಗೆ ಉಪಯೋಗಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X