ಅಡಿಕೆ ಎಲೆಚುಕ್ಕೆ ರೋಗ ತಡೆಗೆ 62 ಕೋಟಿ ರೂ.ನೆರವು ಘೋಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮಲೆನಾಡು ಜಿಲ್ಲೆಗಳಲ್ಲಿ ಎಲೆಚುಕ್ಕೆ ರೋಗಕ್ಕೆ ತುತ್ತಾಗಿ 2ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದು, ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ನೀಡಲಾಗುವುದೆಂದು ಪ್ರಕಟಿಸಿದರು.
Next Story