ಕರ್ನಾಟಕ ಬಜೆಟ್ | ಸ್ವಿಗ್ಗಿ, ಝೊಮ್ಯಾಟೊ ಡೆಲಿವರಿ ಬಾಯ್ಗಳಿಗೆ 4 ಲಕ್ಷ ರೂ. ವಿಮೆ ಸೌಲಭ್ಯ
ಫೋಟೋ- PTI
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ನಲ್ಲಿ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ.
'ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ 'Gig workers', ಅಂದರೆ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರಿಗೆ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಇದರ ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು.' ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
'ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಫಲಾನುಭವಿಗಳು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಾಯಿಸಲು ಕ್ರಮ ವಹಿಸಲಾಗುವುದು' ಎಂದು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.